Uncategorized
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ದಾವಣಗೆರೆ ಜಿಲ್ಲೆಗೆ 19ನೇ ಸ್ಥಾನ
ದಾವಣಗೆರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ಬಾರಿಯ ಫಲಿತಾಂಶದಲ್ಲಿ ದಾವಣಗೆರೆ ಜಿಲ್ಲೆಯು ಗಮನಾರ್ಹ ಸಾಧನೆ ಮಾಡಿದ್ದು, ರಾಜ್ಯ ಮಟ್ಟದಲ್ಲಿ 19ನೇ ಸ್ಥಾನ ಪಡೆದಿದೆ.
ದಾವಣಗೆರೆ ಜಿಲ್ಲೆಯಿಂದ ಈ ಬಾರಿ ಒಟ್ಟು 19,823 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 18,760 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯು ಒಟ್ಟಾರೆ ಶೇ. 94.64 ರಷ್ಟು ಫಲಿತಾಂಶವನ್ನು ದಾಖಲಿಸಿದೆ. ಕಳೆದ ವರ್ಷ ಜಿಲ್ಲೆಯು ಶೇ. 78.00 ರಷ್ಟು ಫಲಿತಾಂಶ ಪಡೆದಿತ್ತು, ಈ ಬಾರಿ ಶೇ. 16.64 ರಷ್ಟು ಹೆಚ್ಚಿನ ಪ್ರಗತಿ ಕಂಡುಬಂದಿದೆ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.