Welcome to ವಿಜಯ್ ಪ್ರಭಾಸ್ ನ್ಯೂಸ್   Click to listen highlighted text! Welcome to ವಿಜಯ್ ಪ್ರಭಾಸ್ ನ್ಯೂಸ್
Uncategorized

ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ವಿರುದ್ಧ ಗ್ರಾಮಸ್ಥರಿಂದ ಡಿಸಿಗೆ ಮನವಿ:ಹೊಸರಿತ್ತಿಯಲ್ಲಿ ಅಕ್ರಮವಾಗಿ ಆಸ್ತಿ ಮಾರಾಟ ಆರೋಪ..!

ಆಸ್ತಿಯನ್ನು ಮತ್ತೆ ಸಂಸ್ಥೆಯ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ವಿರುದ್ಧ ಗ್ರಾಮಸ್ಥರಿಂದ ಡಿಸಿಗೆ ಮನವಿ:ಹೊಸರಿತ್ತಿಯಲ್ಲಿ ಅಕ್ರಮವಾಗಿ ಆಸ್ತಿ ಮಾರಾಟ ಆರೋಪ..!

ಹಾವೇರಿ: ತಾಲೂಕಿನ ಹೊಸರಿತ್ತಿ ಗ್ರಾಮದ ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಸೇರಿದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿ ಆಡಳಿತ ಮಂಡಳಿಯ ಕೆಲ ಪದಾಧಿಕಾರಿಗಳು ಹಾಗೂ ಅವರ ಕುಟುಂಬ ಸದಸ್ಯರ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು ಪ್ರಸ್ತುತ ಆಡಳಿತ ಮಂಡಳಿಯನ್ನು ವಜಾ ಮಾಡಿ, ಆಸ್ತಿಯನ್ನು ಮತ್ತೆ ಸಂಸ್ಥೆಯ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ದೇವಗಿರಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಗ್ರಾಮಸ್ಥರು ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಅಕ್ರಮದ ಕುರಿತು ಮನವಿ ಸಲ್ಲಿಸಿದ್ದಾರೆ. 1965ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕರ್ನಾಟಕ ಏಕೀಕರಣ ಚಳವಳಿಯ ನಾಯಕ ಗುದ್ಲೆಪ್ಪ ಹಳ್ಳಿಕೇರಿ ಅವರಿಂದ ಸ್ಥಾಪಿತವಾದ ಈ ಶಿಕ್ಷಣ ಸಂಸ್ಥೆ, ದಾನಿಗಳ ಸಹಕಾರದಿಂದ ಬೆಳೆದು, ಅನೇಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ. ಆದರೆ, ಇತ್ತೀಚೆಗೆ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಅವ್ಯವಹಾರಗಳು ಹೆಚ್ಚಾಗಿದ್ದು, ಸ್ವಜನ ಪಕ್ಷಪಾತದ ಆರೋಪಗಳು ಕೇಳಿಬರುತ್ತಿವೆ.
ಸಂಸ್ಥೆಗೆ ಸೇರಿದ ಹೊಸರಿತ್ತಿ ಗ್ರಾಮದ ಸರ್ವೆ ನಂ. 71/ಬಿ ಆಸ್ತಿಯನ್ನು ಪದವಿ ಕಾಲೇಜು ಕಟ್ಟಡ ನಿರ್ಮಾಣದ ನೆಪದಲ್ಲಿ ಕಡಿಮೆ ಬೆಲೆಗೆ ಆಡಳಿತ ಮಂಡಳಿಯ ಕೆಲ ಸದಸ್ಯರು ಹಾಗೂ ಅವರ ಬಂಧುಗಳ ಹೆಸರಿಗೆ ಖರೀದಿಸಿಕೊಂಡಿದ್ದಾರೆ. ಪ್ರತಿ 55.70 ಚದರ ಮೀಟರ್ ಜಾಗಕ್ಕೆ ಮಾರುಕಟ್ಟೆಯಲ್ಲಿ ಕನಿಷ್ಠ 30 ಲಕ್ಷ ರೂ. ಬೆಲೆ ಇದ್ದರೂ, ಕೇವಲ 2 ಲಕ್ಷಕ್ಕೆ ನೋಂದಣಿ ಮಾಡಲಾಗಿದೆ. ಇದರಿಂದ ಪ್ರತಿಪ್ಲಾಟ್‌ಗೆ ಸುಮಾರು 28 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಇದು ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಸೆಕ್ಷನ್ 60 ಮತ್ತು 61ರ ಉಲ್ಲಂಘನೆಯಾಗಿದ್ದು, ಸರ್ಕಾರದ ಅನುದಾನ ಪಡೆಯುವ ಸಂಸ್ಥೆಯ ಆಸ್ತಿಯನ್ನು ಮಾರಾಟ ಮಾಡುವಾಗ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸಿಲ್ಲ. ಅಲ್ಲದೇ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ (ಕೆಪಿಟಿಟಿ) 1999ರ ನಿಯಮಗಳನ್ನು ಉಲ್ಲಂಘಿಸಿ ಬಹಿರಂಗ ಹರಾಜು ನಡೆಸದೇ ಆಸ್ತಿಯನ್ನು ಮಾರಾಟ ಮಾಡಲಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ಆಡಳಿತ ಮಂಡಳಿಯ ಕೆಲ ಸದಸ್ಯರಾದ ಸಿದ್ಧಲಿಂಗಪ್ಪ ಹಳ್ಳಿಕೇರಿ ಹಾಗೂ ವೀರಣ್ಣ ಅರಳಿ ಸಭೆಯಲ್ಲಿ ಈ ಅಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರೂ, ಅವರ ಮಾತುಗಳನ್ನು ಇತರರು ಪರಿಗಣಿಸಿಲ್ಲ. ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಲಾದ ಆಸ್ತಿ ವಿವರಗಳ ಮಾಹಿತಿಯನ್ನು ಸಂಸ್ಥೆಯ ಕಾರ್ಯದರ್ಶಿ ನೀಡಲು ನಿರಾಕರಿಸಿರುವುದರಿಂದ ಅನುಮಾನಗಳು ಸೃಷ್ಟಿಯಾಗಿವೆ.
ಈ ಹಿನ್ನೆಲೆಯಲ್ಲಿ, ಪ್ರಸ್ತುತ ಆಡಳಿತ ಮಂಡಳಿಯನ್ನು ವಜಾ ಮಾಡಬೇಕು, ಸರ್ಕಾರದಿಂದ ಆಡಳಿತಾಧಿಕಾರಿ ನೇಮಿಸಬೇಕು. ಅಕ್ರಮವಾಗಿ ಖರೀದಿಸಿದ ಆಸ್ತಿಗಳ ನೋಂದಣಿ ರದ್ದುಪಡಿಸಿ ಸಂಸ್ಥೆಯ ವಶಕ್ಕೆ ಪಡೆಯಬೇಕು ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸ್ಥಳೀಯರಾದ ಬಸವರಾಜ ಮರಳಿಹಳ್ಳಿ, ಐ.ಜಿ.ಕೋರಿ, ಸಿ.ಕೆ.ಹಳ್ಳಿಕೇರಿ, ಎಂ.ಬಿ.ಮುಂಡರಗಿ, ನಿರಂಜನ ಪರಂಗಿ, ಸಿದ್ದಲಿಂಗಪ್ಪ ಕಲಕೋಟಿ, ಮುತ್ತಯ್ಯ ಕಿತ್ತೂರಮಠ, ಶ ಕೆ.ಸಿ.ಕೋರಿ, ಮಲ್ಲಣ್ಣ ಹಳ್ಳಿಕೇರಿ, ಸಿದ್ದಣ್ಣ ಹಳ್ಳಿಕೇರಿ, ರುದ್ರಪ್ಪ ಯತ್ನಳ್ಳಿ, ರವಿ ಚಂದ್ರಗಿರಿ, ಸಿದ್ದಲಿಂಗಪ್ಪ ರಾಚನಾಯ್ಕರ, ಗುದ್ಲೆಪ್ಪ ಸವಣೂರ, ಆನಂದ ಮುರಡೆಪ್ಪನವರ, ಶಂಭಣ್ಣ ಶಾಬಳದ, ಬಿ.ಎಸ್.ದೊಡ್ಡಮನಿ, ಎಸ್.ಜಿ.ದೀಪಾಳಿ, ರವಿ ಗಾಣಗೇರ, ಇತರರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!
Click to listen highlighted text!