Uncategorized

ಏ.24 ರಂದು ಹೊನ್ನುರು ಗೊಲ್ಲರಹಟ್ಟಿ ಗ್ರಾಮದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏಪ್ರಿಲ್‌ 24 ರಂದು ಬೆಳಿಗ್ಗೆ 9.00 ಗಂಟೆಗೆ ಹೊನ್ನುರು ಗೊಲ್ಲರಹಟ್ಟಿ ಗ್ರಾಮದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದವನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಧ ಶ್ರೀಮತಿ ವೇಲಾ ಡಿ.ಕೆ ಉದ್ಪಾಟಿಸುವರು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಅಧ್ಯಕ್ಷತೆ ವಹಿಸಿವರು ಹೆಬ್ಬಾಳು ವಿರಕ್ತಮಠದ ಶ್ರೀ ಶ್ರೀ ಶ್ರೀ ಮ.ನಿ.ಪ್ರ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು, ಮುಖ್ಯ ಅತಿಥಿಗಳಾಗಿ ಗೌರವನ್ವಿತ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಹಾವೀರ ಮ.ಕರೆಣ್ಣವರ , ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌ ಹಾಗೂ ಇತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬದಲಾಗಬೇಕಾದ ಪುಷ್ಪವತಿ ಎಂಬ ಕಿರು ನಾಟಕವನ್ನ ಪ್ರದರ್ಶಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಾನಾಯ್ಕ ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!