Welcome to ವಿಜಯ್ ಪ್ರಭಾಸ್ ನ್ಯೂಸ್   Click to listen highlighted text! Welcome to ವಿಜಯ್ ಪ್ರಭಾಸ್ ನ್ಯೂಸ್
Uncategorized

ಏ 30 ಕ್ಕೆ ಕಮಲಾಪುರ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನ, ಸಮುದಾಯ ಭವನ ಉದ್ಘಾಟನೆ.

ವಿಜಯ್ ಪ್ರಭಾಸ್ ನ್ಯೂಸ್ ಹರಿಹರ ಮಲೆಬೇನ್ನೂರು

ಏ 30 ಕ್ಕೆ ಕಮಲಾಪುರ ಗ್ರಾಮದ ಬೀರಲಿಂಗೇಶ್ವರದೇವಸ್ಥಾನ, ಸಮುದಾಯ ಭವನ ಉದ್ಘಾಟನೆ.

ಹರಿಹರ, ಏ 29 : ತಾಲೂಕಿನ ಕಮಲಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಬೀರಲಿಂಗೇಶ್ವರ ದೇವಸ್ಥಾನ, ಸಮುದಾಯ ಭವನ, ಭೋಜನಾಲಯ ಉದ್ಘಾಟನೆ ಹಾಗೂ ಬೀರಲಿಂಗೇಶ್ವರ ಸ್ವಾಮಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಿದ್ದತೆಗಳು ಪೂರ್ಣಗೊಂಡಿದ್ದು. ದಿ 29 ರಂದು ಧಾರ್ಮಿಕ ಪದ್ದತಿಯಂತೆ ವಿವಿಧಗ್ರಾಮಗಳ ದೇವರುಗಳನ್ನು ಈಗಾಗಲೆ ಕರೆತಂದಿದ್ದು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆಯೋಂದಿಗೆ ಸ್ವಾಗತಿಸಲಾಗಿದೆ. (ದಿ 30) ಬೆಳಿಗ್ಗೆ 6 ಗಂಟೆಯಿಂದ ವಿವಿಧ ಪೂಜೆ, ಹೋಮ, ಹವನಗಳ, ನವಗ್ರಹಗಳ ಪೂಜೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು
ನಡೆಯಲಿವೆ. ನಂತರ 11 ಗಂಟೆಗೆ ಕಾಗಿನೆಲೆ ಕನಕ ಗುರುಪೀಠದ
ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ರಾಜನಹಳ್ಳಿ ವಾಲ್ಮೀಕಿ ಮಹಾಸಂಸ್ಥಾನ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ, ಹನಗವಾಡಿಯ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳ, ಎರೆಹೊಸಳ್ಳಿ ಗ್ರಾಮದ ವೇಮನ ಮಹಾಸಂಸ್ಥಾನ ಗುರುಪೀಠದ ವೇಮಾನಂದಪುರಿ ಮಹಾಸ್ವಾಮಿಗಳ, ನಂದಿಗುಡಿ ವೃಷಭಪುರಿ ಗುರುಪೀಠದ ಮುಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಬಸವ ಮೂರ್ತಿ ಮಾದಾರಚನ್ನಯ್ಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ದೇವಸ್ಥಾನ, ಸಮುದಾಯ ಭವನ, ಭೋಜನಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.ಸಮುದಾಯ ಭವನ ಉದ್ಘಾಟನೆಯನ್ನು ಮುಖ್ಯ ಮಂತ್ರಿ
ಸಿದ್ದರಾಮಯ್ಯನವರು ನೆರವೇರಿಸುವರು. ಜಿಲ್ಲಾ ಉಸ್ತುವಾರಿ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರು ಭೋಜನಾಲಯ ಉದ್ಘಾಟಿಸುವರು. ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ರವರು ವೇದಿಕೆಯ ಕಾರ್ಯಕ್ರಮ ಉದ್ಘಾಟಿಸುವರು, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ದೇವಸ್ಥಾನವನ್ನು ಉದ್ಘಾಟಿಸುವರು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ ಕ್ಯಾಲೆಂಡರ್ ಬಿಡುಗಡೆಗೊಳಿಸುವರು. ಸಂಸದರಾದ ಡಾ| ಪ್ರಭಾ ಮಲ್ಲಿಕಾರ್ಜುನ ಅವರು ಅತಿಥಿ ಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೆರಿಸುವರು. ಉಪ ಸಭಾಪತಿಗಳಾದ ರುದ್ರಪ್ಪ ಲಮಾಣಿ,ವಿಧಾನ ಪರೀಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯನವರು ಪುಸ್ತಕ ಬಿಡುಗಡೆಗೊಳಿಸುವರು. ಮಾಜಿ ಸಚಿವರುಗಳಾದ ಕೆ.ಎಸ್ ಈಶ್ವರಪ್ಪ, ಹೆಚ್.ಆಂಜನೇಯ, ಎಂ.ಟಿ.ಬಿ ನಾಗರಾಜ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ದಯಾನಂದ್, ಶಾಸಕರಾದ ಬಿ.ಪಿ ಹರೀಶ್, ಎಂ.ಮಂಜುನಾಥ್ ಆಗಮಿಸುವರೆಂದು ಪ್ರಕಟಣೆ ತಿಳಿಸಿದೆ.
ವಿಜಯ್ ಪ್ರಭಾಸ್ ನ್ಯೂಸ್ ಹರಿಹರ ಮಲೆಬೇನ್ನೂರು

Related Articles

Leave a Reply

Your email address will not be published. Required fields are marked *

Back to top button
error: Content is protected !!
Click to listen highlighted text!