Uncategorized

ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ಗೆ ಬಂಧನ ವಾರಂಟ್ ಜಾರಿ

ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರಂಟ್

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ: ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆ ನಡೆದಿದೆ.

ಈ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಶಾಸಕರು ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಾಗಿತ್ತು. ಈ ಕುರಿತು ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸೂಚನೆ ನೀಡಿತ್ತು.

ವಾರಂಟ್ ಹೊರಡಿಸಲು ಕಾರಣ: ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಶಾಸಕ ಬಿ.ಪಿ. ಹರೀಶ್ ಅವರು ವಿಚಾರಣೆಗೆ ಹಾಜರಾಗದೆ ಗೈರುಹಾಜರಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು,ಸಂತೋಷ್ ಗಜಾನಾನ ಭಟ್ ರವರು ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬಂಧನ ವಾರಂಟ್ ಜಾರಿ ಮಾಡಿದ್ದಾರೆ.ಮೇ 7ಕ್ಕೆ ಹಾಜರು ಪಡಿಸಲು ಹರಿಹರ ಠಾಣಾಧಿಕಾರಿಗೆ ನಿದರ್ಶನ ನೀಡಿದ್ದಾರೆ

ಕಾನೂನು ಪ್ರಕ್ರಿಯೆಗಳಿಗೆ ಗೌರವ ನೀಡದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿರುದ್ಧ ಇಂತಹ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಈಗ ಶಾಸಕ ಹರೀಶ್ ಅವರಿಗೆ ಈ ವಾರಂಟ್ ದೊಡ್ಡ ಸಂಕಷ್ಟ ತಂದೊಡ್ಡಿದೆ.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!