Uncategorized

ಮರಬನಹಳ್ಳಿ ಬಳಿ ಬಸ್ ಪಲ್ಟಿ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ದಾವಣಗೆರೆಯಿಂದ ಬಸವಾಪಟ್ಟಣಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು

  • ಮರಬನಹಳ್ಳಿ ಬಳಿ ಬಸ್ ಪಲ್ಟಿ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು
    ದಾವಣಗೆರೆ, ದಾವಣಗೆರೆಯಿಂದ ಬಸವಾಪಟ್ಟಣಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು
  • , ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಸಮೀಪ ತಲುಪಿದಾಗ ತಾಂತ್ರಿಕ ದೋಷದಿಂದಾಗಿ (ಆಕ್ಸೆಲ್ ಮುರಿದು) ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ ಎಂದು ವರದಿಯಾಗಿದೆ.
    ಈ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸಮೀಪದ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಜಿಲ್ಲಾಧಿಕಾರಿಗಳ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ದಾವಣಗೆರೆ ಜಿಲ್ಲಾಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ಸ್ಥಿತಿಗತಿಯನ್ನು ವಿಚಾರಿಸಿದರು. ಅಪಘಾತಕ್ಕೊಳಗಾದ ಸಂತ್ರಸ್ತರಿಗೆ ಹಾಗೂ ಅವರ ಕುಟುಂಬದವರಿಗೆ ಧೈರ್ಯ ತುಂಬಿದ ಅವರು, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
    ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ, ಗಾಯಾಳುಗಳಿಗೆ ಯಾವುದೇ ವಿಳಂಬವಿಲ್ಲದೆ ತುರ್ತು ಮತ್ತು ಗುಣಮಟ್ಟದ ಚಿಕಿತ್ಸೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗಂಭೀರವಾಗಿ ಗಾಯಗೊಂಡವರಿಗೆ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!