Uncategorized

ಹರಿಹರ: ಗಾಂಧಿ ಮೈದಾನದಲ್ಲಿ ಸಾರ್ವಜನಿಕ ವಿನಾಯಕ ಸಂಘದ ಹಂದರಗಂಬ ಪೂಜೆ; ಶಾಸಕ ಬಿ.ಪಿ. ಹರೀಶ್, ಕಾಂಗ್ರೆಸ್ ಮುಖಂಡ ಎನ್.ಹೆಚ್. ಶ್ರೀನಿವಾಸ್ ಭಾಗಿ

ಪ್ರಮುಖ ಹಿಂದು ಮಸ್ಲಿಂ ಮತ್ತು ಕೃಸ್ತ ಮುಖಂಡರು, ನೂರಾರು ಭಕ್ತಾದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ಗಣೇಶನ ಕೃಪೆಗೆ ಪಾತ್ರರಾದರು.

 

ಹರಿಹರ: ಗಾಂಧಿ ಮೈದಾನದಲ್ಲಿ ಸಾರ್ವಜನಿಕ ವಿನಾಯಕ ಸಂಘದ ಹಂದರಗಂಬ ಪೂಜೆ; ಶಾಸಕ ಬಿ.ಪಿ. ಹರೀಶ್, ಕಾಂಗ್ರೆಸ್ ಮುಖಂಡ ಎನ್.ಹೆಚ್. ಶ್ರೀನಿವಾಸ್ ಭಾಗಿ
ಹರಿಹರ: ಇಲ್ಲಿನ ಪ್ರಸಿದ್ಧ ಗಾಂಧಿ ಮೈದಾನದಲ್ಲಿ ಶ್ರೀ ಸಾರ್ವಜನಿಕ ವಿನಾಯಕ ಸಂಘದ ವತಿಯಿಂದ ಗಣೇಶೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಹಂದರಗಂಬ ಪೂಜಾ ಕಾರ್ಯಕ್ರಮವು ಅತ್ಯಂತ ಶ್ರದ್ಧಾಭಕ್ತಿಗಳಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಪಿ. ಹರೀಶ್ ಅವರು ಪಾಲ್ಗೊಂಡು ಶ್ರೀ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.
ಇದೇ ಸಂದರ್ಭದಲ್ಲಿ ಹರಿಹರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಎನ್.ಹೆಚ್. ಶ್ರೀನಿವಾಸ್ ನಂದಿಗಾವಿ ಅವರು ಉಪಸ್ಥಿತರಿದ್ದು, ದೇವರ ದರ್ಶನ ಪಡೆದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಸಾರ್ವಜನಿಕ ವಿನಾಯಕ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು, ಪ್ರಮುಖ ಹಿಂದು ಮಸ್ಲಿಂ ಮತ್ತು ಕೃಸ್ತ ಮುಖಂಡರು, ನೂರಾರು ಭಕ್ತಾದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ಗಣೇಶನ ಕೃಪೆಗೆ ಪಾತ್ರರಾದರು.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!