Uncategorized
ಮಲೇಬೆನ್ನೂರು ನಾಡಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಉಪ ತಹಶೀಲ್ದಾರ್ ಯೋಗೇಶ್ ಅವರಿಂದ ಧ್ವಜಾರೋಹಣ
ಮಲೇಬೆನ್ನೂರು: ಇಲ್ಲಿನ ನಾಡಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನೋತ್ಸವವನ್ನು ಅತ್ಯಂತ ಸಡಗರ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.

ಮಲೇಬೆನ್ನೂರು ನಾಡಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಉಪ ತಹಶೀಲ್ದಾರ್ ಯೋಗೇಶ್ ಅವರಿಂದ ಧ್ವಜಾರೋಹಣ
ಮಲೇಬೆನ್ನೂರು: ಇಲ್ಲಿನ ನಾಡಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನೋತ್ಸವವನ್ನು ಅತ್ಯಂತ ಸಡಗರ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಉಪ ತಹಶೀಲ್ದಾರ್ ಶ್ರೀ ಯೋಗೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಈ ಸುದಿನದಂದು ಮಲೇಬೆನ್ನೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು (ಗ್ರಾಮ ಲೆಕ್ಕಾಧಿಕಾರಿಗಳು), ನಾಡಕಚೇರಿಯ ಗ್ರಾಮ ಸಹಾಯಕರು ಹಾಗೂ ಸ್ಥಳೀಯ ಪುರಸಭೆಯ ಜನಪ್ರತಿನಿಧಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು