Uncategorized

ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಭಾಪತಿಗಳು ಕ್ರಮ

ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸದಸ್ಯರನ್ನು ಕಡೆಗಣಿಸಿದ್ದಾರೆಯೇ? ಎಂಬುದರ ಕುರಿತು ಸಮಗ್ರ ವಿಚಾರಣೆ ನಡೆಯಬೇಕು ಎಂದು ಅಸಿಫ್ ಜುನೈದಿ ಒತ್ತಾಯಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಭಾಪತಿಗಳು ಕ್ರಮಜರುಗಿಸಲಿ

  1. ಹರಿಹರ: ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಬೆಟ್ಟದ ಪರಿಸರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಸಮುಚ್ಚಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣದ ಭೂಮಿಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬರ್ ಅವರನ್ನು ಆಹ್ವಾನಿಸದೆ ಕಡೆಗಣಿಸಿರುವುದು ಗಂಭೀರ ಶಿಷ್ಟಾಚಾರ ಉಲ್ಲಂಘನೆಯಾಗಿದ್ದು, ಈ ಬಗ್ಗೆ ವಿಧಾನ ಪರಿಷತ್ ಸಭಾಪತಿಗಳು ತಕ್ಷಣ ಮಧ್ಯಪ್ರವೇಶಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹರಿಹರ ಕಾಂಗ್ರೆಸ್ ಮುಖಂಡ ಅಸಿಫ್ ಜುನೈದಿ ಆಗ್ರಹಿಸಿದ್ದಾರೆ.ಜಿಲ್ಲಾಧಿಕಾರಿ, ಸಚಿವರು ಹಾಗೂ ಸಂಸತ್ ಸದಸ್ಯರು ಸೇರಿದಂತೆ ಹಲವು ಪ್ರಮುಖ ಜನಪ್ರತಿನಿಧಿಗಳು ಭಾಗವಹಿಸಿದ್ದ ಸರ್ಕಾರಿ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡದಿರುವುದು ಸಾಮಾನ್ಯ ಆಡಳಿತಾತ್ಮಕ ಲೋಪವೆಂದು ಪರಿಗಣಿಸಲು ಸಾಧ್ಯವಿಲ್ಲ. ಚುನಾಯಿತ ಜನಪ್ರತಿನಿಧಿಯ ಹಕ್ಕು, ಗೌರವ ಹಾಗೂ ಶಿಷ್ಟಾಚಾರವನ್ನು ಕಡೆಗಣಿಸಿರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
  2. ಸಮಗ್ರ ವಿಚಾರಣೆಗೆ ಒತ್ತಾಯ:
  3. ವಿಧಾನ ಪರಿಷತ್ ಸದಸ್ಯರಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಆಹ್ವಾನ ನೀಡದಿರುವುದಕ್ಕೆ ಕಾರಣವೇನು? ಆಹ್ವಾನಿತರ ಪಟ್ಟಿಯನ್ನು ಯಾರು ಸಿದ್ಧಪಡಿಸಿದರು? ಸಂಬಂಧಪಟ್ಟ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸದಸ್ಯರನ್ನು ಕಡೆಗಣಿಸಿದ್ದಾರೆಯೇ? ಎಂಬುದರ ಕುರಿತು ಸಮಗ್ರ ವಿಚಾರಣೆ ನಡೆಯಬೇಕು ಎಂದು ಅಸಿಫ್ ಜುನೈದಿ ಒತ್ತಾಯಿಸಿದ್ದಾರೆ.
  4. ವಿಧಾನ ಪರಿಷತ್ ಸಭಾಪತಿಗಳು ಈ ವಿಷಯವನ್ನು ಕೇವಲ ದೂರು ಅಥವಾ ಪತ್ರವ್ಯವಹಾರಕ್ಕೆ ಸೀಮಿತಗೊಳಿಸದೆ, ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಪಷ್ಟ ವರದಿ ಪಡೆದು, ಶಿಷ್ಟಾಚಾರ ಉಲ್ಲಂಘನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ, ಅವರ ಹುದ್ದೆ ಅಥವಾ ಪ್ರಭಾವವನ್ನು ಪರಿಗಣಿಸದೆ ಜವಾಬ್ದಾರಿ ನಿಗದಿಪಡಿಸಬೇಕು ಎಂದು ಅವರು ಹೇಳಿದ್ದಾರೆ.ಮಾದರಿ ಕ್ರಮಕ್ಕೆ ಆಗ್ರಹ:ಇಂತಹ ಘಟನೆಗಳಿಗೆ ಅಧಿಕಾರಿಗಳು ಉತ್ತರದಾಯಿತ್ವದಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡಿದರೆ, ಮುಂದಿನ ದಿನಗಳಲ್ಲಿ ಚುನಾಯಿತ ಜನಪ್ರತಿನಿಧಿಗಳನ್ನು ಕಡೆಗಣಿಸುವ ಪ್ರವೃತ್ತಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ. ಆದ್ದರಿಂದ ಈ ಪ್ರಕರಣದಲ್ಲಿ ಸಭಾಪತಿಗಳಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದ್ದು, ವಿಧಾನ ಪರಿಷತ್ ಸದಸ್ಯರ ಹಕ್ಕು ಮತ್ತು ಗೌರವವನ್ನು ರಕ್ಷಿಸುವ ನಿಟ್ಟಿನಲ್ಲಿ ಇದು ಮಾದರಿ ಕ್ರಮವಾಗಬೇಕು ಎಂದು ಅಸಿಫ್ ಜುನೈದಿ ತಿಳಿಸಿದ್ದಾರೆ.ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಕ್ಷಭೇದ ಮರೆತು ಎಲ್ಲ ಜನಪ್ರತಿನಿಧಿಗಳಿಗೆ ಸಮಾನ ಗೌರವ ನೀಡುವಂತೆ ಸರ್ಕಾರ ಹಾಗೂ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು. ಜೊತೆಗೆ, ಈ ಘಟನೆಯ ಕುರಿತು ಸಂಬಂಧಪಟ್ಟ ಇಲಾಖೆಯಿಂದ ವಿವರಣೆ ಪಡೆದು, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವಂತೆ ವಿಧಾನ ಪರಿಷತ್ ಸಭಾಪತಿಗಳಿಗೆ ಅವರು ಮನವಿ ಮಾಡಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!