Uncategorized

ಹರಿಹರ ತಾಲ್ಲೂಕು ಆಡಳಿತದಿಂದ ಸೌಹಾರ್ದಯುತ ಶ್ರೀ ಕೃಷ್ಣ ಜಯಂತಿ ಆಚರಣೆ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ (ನಿ) ಅಧ್ಯಕ್ಷರಾದ ಶ್ರೀ ಮರಿಯೋಜಿರಾವ್ ಅವರು ಪಾಲ್ಗೊಂಡಿದ್ದರು.

  • ಹರಿಹರ ತಾಲ್ಲೂಕು ಆಡಳಿತದಿಂದ ಸೌಹಾರ್ದಯುತ ಶ್ರೀ ಕೃಷ್ಣ ಜಯಂತಿ ಆಚರಣೆ
  • ಹರಿಹರ: ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿಯನ್ನು ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸೌಹಾರ್ದತೆಯಿಂದ ಆಚರಿಸಲಾಯಿತು.
    ಸ್ಥಳೀಯ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಈ ಸಮಾರಂಭದ ಅಧ್ಯಕ್ಷತೆಯನ್ನು ಮಾನ್ಯ ತಹಶೀಲ್ದಾರ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ (ನಿ) ಅಧ್ಯಕ್ಷರಾದ ಶ್ರೀ ಮರಿಯೋಜಿರಾವ್ ಅವರು ಪಾಲ್ಗೊಂಡಿದ್ದರು.
    ಇದೇ ಸಂದರ್ಭದಲ್ಲಿ ಯಾದವ ಹಾಗೂ ಗೊಲ್ಲ ಸಮಾಜದ ತಾಲ್ಲೂಕು ಅಧ್ಯಕ್ಷರುಗಳು, ಪ್ರಮುಖ ಮುಖಂಡರು ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ಎಲ್ಲಾ ವರ್ಗದವರನ್ನು ಒಗ್ಗೂಡಿಸಿ ಆಚರಿಸಲಾದ ಈ ಕಾರ್ಯಕ್ರಮವು ತಾಲ್ಲೂಕಿನಲ್ಲಿ ಸೌಹಾರ್ದತೆಯ ಸಂದೇಶವನ್ನು ಸಾರಿತು.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!