Uncategorized

ಮಲೇಬೆನ್ನೂರು – ಜಿಗಳಿ ರಸ್ತೆ ಕಾಮಗಾರಿ ವಿಳಂಬ: ಹರಿಹರದಲ್ಲಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ತೌಫಿಕ್ ಉಲ್ಲಾ

ಪ್ರಜಾ ಸೇವಾ’ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಿದರು.

ಮಲೇಬೆನ್ನೂರು – ಜಿಗಳಿ ರಸ್ತೆ ಕಾಮಗಾರಿ ವಿಳಂಬ: ಹರಿಹರದಲ್ಲಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ತೌಫಿಕ್ ಉಲ್ಲಾ

ಹರಿಹರ: ಮಲೇಬೆನ್ನೂರಿನಿಂದ ಜಿಗಳಿ ವರೆಗಿನ ರಸ್ತೆ ಕಾಮಗಾರಿ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವುದನ್ನು ಖಂಡಿಸಿ, ಮಲೇಬೆನ್ನೂರಿನ ಪ್ರಮುಖ ಸಾಮಾಜಿಕ ಕಾರ್ಯಕರ್ತರಾದ ಶ್ರೀ ತೌಫಿಕ್ ಉಲ್ಲಾ ಅವರು ಹರಿಹರ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಇಂದು ನಡೆದ ‘ಪ್ರಜಾ ಸೇವಾ’ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಿದರು.

ತಾಲ್ಲೂಕು ಆಡಳಿತದ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ತೌಫಿಕ್ ಉಲ್ಲಾ ಅವರು, “ಮಲೇಬೆನ್ನೂರು – ಜಿಗಳಿ ರಸ್ತೆ ಕಾಮಗಾರಿಯು ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ರಸ್ತೆಯುದ್ದಕ್ಕೂ ಬಿದ್ದಿರುವ ಬೃಹತ್ ಗುಂಡಿಗಳಿಂದಾಗಿ ಪ್ರತಿದಿನ ವಾಹನ ಸವಾರರು ಪ್ರಾಣಭಯದಲ್ಲೇ ಸಂಚರಿಸುವಂತಾಗಿದೆ. ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಳ್ಳುತ್ತಿಲ್ಲ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಹಾಗೂ ಸಾರ್ವಜನಿಕರ ಪರದಾಟ:”ಈ ರಸ್ತೆಯು ಈ ಭಾಗದ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ನಿತ್ಯ ನೂರಾರು ರೈತರು ತಾವಿ ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ಮಳೆಗಾಲದಲ್ಲಿ ರಸ್ತೆ ಕೆಸರು ಗದ್ದೆಯಂತಾಗುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ” ಎಂದು ಅವರು ಅಧಿಕಾರಿಗಳ ಗಮನಕ್ಕೆ ತಂದರು.ಕೂಡಲೇ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪುನರಾರಂಭಿಸಿ, ನಿಗದಿತ ಅವಧಿಯೊಳಗೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು ಎಂದು ಅವರು ಸಾರ್ವಜನಿಕರ ಪರವಾಗಿ ಒತ್ತಾಯಿಸಿದರು.

ಅಧಿಕಾರಿಗಳ ಭರವಸೆ:ಸಾಮಾಜಿಕ ಕಾರ್ಯಕರ್ತ ತೌಫಿಕ್ ಉಲ್ಲಾ ಅವರಿಂದ ದೂರನ್ನು ಸ್ವೀಕರಿಸಿದ ತಾಲ್ಲೂಕು ಆಡಳಿತದ ಅಧಿಕಾರಿಗಳು, ಸಮಸ್ಯೆಯ ಗಂಭೀರತೆಯನ್ನು ಒಪ್ಪಿಕೊಂಡರು. ಈ ಕುರಿತು ತಕ್ಷಣವೇ ಲೋಕೋಪಯೋಗಿ ಇಲಾಖೆ (PWD) ಹಾಗೂ ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಚರ್ಚೆ ನಡೆಸಿ, ಸ್ಥಗಿತಗೊಂಡಿರುವ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಾಮಾಜಿಕ ಕಾರ್ಯಕರ್ತ ತೌಫೀಕ್ಉಲ್ಲ

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!