ಮಲೇಬೆನ್ನೂರಿನಲ್ಲಿ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ: ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಜಂಟಿ ಆಶ್ರಯ
ಆರೋಗ್ಯ ಕಾಪಾಡುವುದು ನಮ್ಮ ಆದ್ಯತೆ:

ಮಲೇಬೆನ್ನೂರಿನಲ್ಲಿ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ: ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಜಂಟಿ ಆಶ್ರಯ
ವಿಜಯ್ ಪ್ರಭಾಸ್ ನ್ಯೂಸ್ ಮಲೇಬೆನ್ನೂರು, ಸೆ.೨೧:ಸ್ಥಳೀಯ ಪುರಸಭೆ ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಹೀ ಸೇವಾ – 2026 ಅಭಿಯಾನ ಹಾಗೂ ಸೆಪ್ಟೆಂಬರ್ 23 ರಂದು ನಡೆಯಲಿರುವ ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವಿಶೇಷ ಶಿಬಿರದಲ್ಲಿ ಪುರಸಭೆಯ ಎಲ್ಲಾ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿ ವರ್ಗದವರ ಆರೋಗ್ಯವನ್ನು ತಜ್ಞ ವೈದ್ಯರು ತಪಾಸಣೆ ನಡೆಸಿದರು. ಮುಖ್ಯವಾಗಿ ರಕ್ತದೊತ್ತಡ (ಬಿ.ಪಿ), ಮಧುಮೇಹ (ಶುಗರ್) ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆಗಳನ್ನು ಕೈಗೊಂಡು, ಅಗತ್ಯವಿರುವವರಿಗೆ ಉಚಿತವಾಗಿ ಔಷಧ ಹಾಗೂ ಸೂಕ್ತ ಆರೋಗ್ಯ ಸಲಹೆಗಳನ್ನು ನೀಡಲಾಯಿತು.
ಆರೋಗ್ಯ ಕಾಪಾಡುವುದು ನಮ್ಮ ಆದ್ಯತೆ:
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪುರಸಭೆಯ ಪರಿಸರ ಅಭಿಯಂತರರಾದ ಉಮೇಶ್ ಆರ್.ಎಸ್, “ಸಮಾಜದ ಸ್ವಾಸ್ಥ್ಯಕ್ಕಾಗಿ ನಿರಂತರವಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಹಗಲಿರುಳು ಶ್ರಮಿಸುವ ಕಾರ್ಮಿಕರ ಆರೋಗ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ” ಎಂದು ತಿಳಿಸಿದರು.
ಶಿಬಿರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಶಿವರಾಜ್ ಜಿ. ಕೂಸಗಟ್ಟಿ, ಕಮ್ಯೂನಿಟಿ ಮೊಬೈಲೈಸರ್ ಗಳಾದ ಕಮಲ ಟಿ.ಆರ್, ರಖೈಬಾ ಖಾನಮ್ ಸೇರಿದಂತೆ ಪುರಸಭೆಯ ಸಿಬ್ಬಂದಿ ವರ್ಗದವರು ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.