ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಹರಿಹರ ನಗರಕ್ಕೆ ಸಿಟಿ ಬಸ್ ಸೇವೆಗೆ ಆಗ್ರಹಿಸಿ ಮನವಿ.
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹರಿಹರ ತಾಲೂಕು ಘಟಕದ ವತಿಯಿಂದ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕರಾದ ಅಝಗರ್ ಅಲಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಹರಿಹರ ನಗರಕ್ಕೆ ಸಿಟಿ ಬಸ್ ಸೇವೆಗೆ ಆಗ್ರಹಿಸಿ ಮನವಿ.
ವಿಜಯ್ ಪ್ರಭಾಸ್ ನ್ಯೂಸ್ ಹರಿಹರ: ಹರಿಹರ ನಗರದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತಕ್ಷಣವೇ ಸಿಟಿ ಬಸ್ ಸೇವೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹರಿಹರ ತಾಲೂಕು ಘಟಕದ ವತಿಯಿಂದ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕರಾದ ಅಝಗರ್ ಅಲಿ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ದಿನೇ ದಿನೇ ಜನಸಂಖ್ಯೆ ಮತ್ತು ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದೆ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಮನಗಂಡು ತಕ್ಷಣವೇ ನಗರದ ಪ್ರಮುಖ ಮಾರ್ಗಗಳಲ್ಲಿ ಸಿಟಿ ಬಸ್ ಸಂಚಾರ ಆರಂಭಿಸಬೇಕು ಎಂದು ಕರವೇ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹರಿಹರ ತಾಲೂಕು ಅಧ್ಯಕ್ಷರಾದ ರಮೇಶ್ ಮಾನೆ, ನಗರ ಅಧ್ಯಕ್ಷ ಪ್ರೀತಮ್ ಬಾಬು, ಹಾಗೂ ಪ್ರಮುಖ ಪದಾಧಿಕಾರಿಗಳಾದ ಶೇಕ್ ಫಾಜಲ್, ಅಲಿ ಅಕ್ಬರ್, ಮೊಹಮದ್ ರಾಖಿಫ್, ಮಂಜುನಾಥ್, ರುದ್ರೇಶ್, ಜಯಣ್ಣ, ರಂಗಣ್ಣ, ರಾಯ್, ಗಣೇಶ್, ಶಿವುಕುಮಾರ್ ಸೇರಿದಂತೆ ಸಂಘಟನೆಯ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.