Uncategorized

ರಾಹುಲ್ ಗಾಂಧಿ ಬಂಧನಕ್ಕೆ ಹರಿಹರದಲ್ಲಿ ತೀವ್ರ ಆಕ್ರೋಶ: ಯುವ ಕಾಂಗ್ರೆಸ್‌ನಿಂದ ಬೃಹತ್ ಸಾಂಕೇತಿಕ ಪ್ರತಿಭಟನೆ, ಪುತ್ಥಳಿ ದಹನ

ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ರಾಹುಲ್ ಗಾಂಧಿ ಬಂಧನಕ್ಕೆ ಹರಿಹರದಲ್ಲಿ ತೀವ್ರ ಆಕ್ರೋಶ: ಯುವ ಕಾಂಗ್ರೆಸ್‌ನಿಂದ ಬೃಹತ್ ಸಾಂಕೇತಿಕ ಪ್ರತಿಭಟನೆ, ಪುತ್ಥಳಿ ದಹನ
ವಿಜಯ್ ಪ್ರಭಾಸ್ ನ್ಯೂಸ್ ಹರಿಹರ: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಬಂಧನವನ್ನು ಖಂಡಿಸಿ ಹರಿಹರದ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಹರಿಹರ ನಗರಸಭೆ ಸದಸ್ಯ ಮುಜ್ಮಿಲ್ ಬಿಲ್ಲು, ತಾಲೂಕು ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ನಾಸಿರ್ (ಅನ್ನು), ಉಪಾಧ್ಯಕ್ಷ ಅಬ್ದುಲ್ ಕರೀಂ ಎ.ಆರ್., ಹಾಗೂ ವಸೀಮ್,ಸಂತೋಷ ನೊಟದವರ್.ವಿಜಯ್ ಕುಮಾರ ಅವರು ಜಂಟಿಯಾಗಿ ವಹಿಸಿದ್ದರು.
ನಗರದ ಪ್ರಮುಖ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ಸಂದರ್ಭದಲ್ಲಿ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ, ಕೇಂದ್ರ ಸರ್ಕಾರದ ಸಾಂಕೇತಿಕ ಪುತ್ಥಳಿಯನ್ನು ದಹಿಸಿ ಆಕ್ರೋಶ ಹೊರಹಾಕಿದರು.
ಉಗ್ರ ಹೋರಾಟದ ಎಚ್ಚರಿಕೆ:
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಮುಖರು, “ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿದೆ. ಪ್ರಜಾಪ್ರಭುತ್ವದ ಧ್ವನಿಯಾಗಿರುವ ರಾಹುಲ್ ಗಾಂಧಿ ಅವರ ಬಂಧನವು ರಾಜಕೀಯ ಪ್ರೇರಿತವಾಗಿದೆ” ಎಂದು ಕಿಡಿಕಾರಿದರು. ತಕ್ಷಣವೇ ನಮ್ಮ ನಾಯಕರನ್ನು ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದ ಯುವ ಕಾಂಗ್ರೆಸ್ ನಾಯಕರು, ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು
ಈ ದಿಡೀರ್ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಅಡ್ಮಿನ್ ನಿಧಿಕುಮಾರ್, ರಾಜ್ಯ ಕಾರ್ಯದರ್ಶಿ ಅಬು ತಾಹೇರ್, ಬ್ಲಾಕ್ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷ ಜಾಫರ್ ಸಾದಿಕ್, ಪ್ರಮುಖ ಮುಖಂಡರಾದ ತಾಹೀರ್, ವಸೀಮ್, ಇಮ್ತಿಯಾಜ್ ಜಲಾಲ ಸೇರಿದಂತೆ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!