ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು
ಹರಿಹರ ಮಕ್ಕಳ ಮೇಲೆ ಲೈಂಗಿಕ ಕಿರುಕುಳದ ದೂರಿನನ್ವಯ
ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು
ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧಫೋಕ್ಸೋ ಪ್ರಕರಣ ದಾಖಲಾಗಿದೆ.
ಮಠದ ವಸತಿ ನಿಲದಲ್ಲಿರುವ ಮಕ್ಕಳಿಂದ ವಚನಾನಂದ ಶ್ರೀಗಳು ಮಸಾಜ್ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಬಾಲಕನ ತಾಅಯಿಯೊಬರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ದಾಅಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಲಕ್ಷ್ಮೀಶ್ವರ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ ಐ ಆರ್, ಕೃತ್ಯ ನಡೆದ ಸ್ಥಳದ ವ್ಯಾಪ್ತಿ ಹಿನ್ನೆಲೆಯಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಕೇಸ್ ವರ್ಗಾಯಿಸಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ದೂರುದಾರರ ಹೇಳಿಕೆ ಪಡೆದುಕೊಂಡಿದ್ದಾರೆ.
ಹರಿಹರ ಮಕ್ಕಳ ಮೇಲೆ ಲೈಂಗಿಕ ಕಿರುಕುಳದ ದೂರಿನನ್ವಯ ಇಲ್ಲಿನ ಪಂಚಮಸಾಲಿ ಪೀಠದ ವಚನಾನಂದ ಶ್ರೀ ಅವರನ್ನು ಹರಿಹರ ಗ್ರಾಮೀಣ ಪೊಲೀಸರು, ಠಾಣೆಗೆ ಖುದು ಹಾಜರಾಗಿ ವಿಚಾರಣೆಗೆ ಸಹಕರಿಸಿದರು, ನಂತರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ಬಳಿಕ ಮಠಕ್ಕೆ ಕಳುಹಿಸಿ ಕೊಡಲಾಯಿತು.
2024ರ ಮಾ.20ರಂದು ಮಠದ ವಿದ್ಯಾರ್ಥಿ ನಿಲಯದಲ್ಲಿ, ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಮಹಿಳೆಯೊಬ್ಬರು ದೂರು ನೀಡಿದ್ದರು. ವಿಚಾರಣೆ ಸಮಯದಲ್ಲಿ ಪೊಲೀಸರು ಕೇಳಿದ 50ಕ್ಕೂ ಅಧಿಕ ಪ್ರಶ್ನೆಗಳಿಗೆ ವಚನ ಶ್ರೀ ಉತ್ತರಿಸಿದ್ದಾರೆಂದು ತಿಳಿದುಬಂದಿದೆ. ನಾನು ಕಾನೂನನ್ನು ಗೌರವಿಸಿ ವಿಚಾರಣೆಗೆ ಸಹಕರಿಸಿದ್ದೇನೆ. ಸತ್ಯಕ್ಕೆ ಯಾವಾಗಲೂ ಜಯ ಎಂದು ವಚನಾನಂದ ಶ್ರೀ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
ವೈದ್ಯಕೀಯ ತಪಾಸಣೆ:ವಿಚಾರಣೆ ಮುಗಿದ ನಂತರ, ನಗರದ ದಾಮೋದರ ಮಂಜುನಾಥ ಪೈ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಶ್ರೀಗಳು ದೈಹಿಕವಾಗಿ ಸದೃಢರಾಗಿದ್ದು, ಅವರ ಉಗುರು, ಕೂದಲು ಸೇರಿದಂತೆ ತಪಾಸಣೆಗೆ ಬೇಕಾದ ಮಾದರಿಗಳನ್ನು ಸಂಗ್ರಹಿಸಿ, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಭಕ್ತರ ದಂಡು: ಠಾಣೆಗೆ ವಿಚಾರಣೆಗಾಗಿ ಶ್ರೀ ಅವರನ್ನು ಕರೆ ತಂದಿರುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ಠಾಣೆಯ ಎದುರು ಭಕ್ತರು ಶ್ರೀಗಳ ಪರವಾಗಿ ಜಯಘೋಷ ಹಾಕಿ, ಟ್ರಸ್ಟ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು