Uncategorized

ವಾಹನ ದಟ್ಟಣೆಯಿಂದ ಅಸ್ತವ್ಯಸ್ತಗೊಂಡ ಅಥಣಿ: ಟ್ರಾಫಿಕ್ ಸಿಗ್ನಲ್, ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ

ಪ್ರಮುಖ ರಸ್ತೆಗಳ ಅಗಲೀಕರಣ ಮತ್ತು ಅವಶ್ಯಕವಿರುವೆಡೆ ರೋಡ್ ಬ್ರೇಕರ್ ಅಳವಡಿಕೆ. ಪಟ್ಟಣದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಾಣ. ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಒತ್ತಾಯ:

ವಾಹನ ದಟ್ಟಣೆಯಿಂದ ಅಸ್ತವ್ಯಸ್ತಗೊಂಡ ಅಥಣಿ: ಟ್ರಾಫಿಕ್ ಸಿಗ್ನಲ್, ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರ ಆಗ್ರಹ
ವಿಜಯ್ ಪ್ರಭಾಸ್ ನ್ಯೂಸ್ ಅಥಣಿ: ಬೆಳಗಾವಿ ಜಿಲ್ಲೆಯ ಅತಿ ದೊಡ್ಡ ತಾಲೂಕು ಕೇಂದ್ರವಾದ ಅಥಣಿ ಪಟ್ಟಣದಲ್ಲಿ ವಾಹನ ದಟ್ಟಣೆ ಮಿತಿಮೀರಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದರಿಂದಾಗಿ ಪ್ರತಿನಿತ್ಯ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಪಟ್ಟಣದ ಪ್ರಮುಖ ಜಂಕ್ಷನ್‌ಗಳಾದ ಅಂಬೇಡ್ಕರ್ ವೃತ್ತ, ದೇಸಾಯಿ ಸರ್ಕಲ್ ಹಾಗೂ ಬಸವೇಶ್ವರ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಇಲ್ಲದಿರುವುದೇ ಈ ಸಂಚಾರ ಅವ್ಯವಸ್ಥೆಗೆ ಮುಖ್ಯ ಕಾರಣವಾಗಿದೆ. ವಾಹನಗಳು ಯಾವುದೇ ನಿಯಂತ್ರಣವಿಲ್ಲದೆ ಸಂಚರಿಸುತ್ತಿರುವುದರಿಂದ ಈ ವೃತ್ತಗಳಲ್ಲಿ ನಿರಂತರವಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಪ್ರಮುಖ ಬೇಡಿಕೆಗಳು:
ಅಥಣಿ ಪಟ್ಟಣದಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲು ತಕ್ಷಣವೇ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಹಾಗೂ ಸಂಘಟನೆಗಳು ಒತ್ತಾಯಿಸಿವೆ:
ಪ್ರತ್ಯೇಕ ಟ್ರಾಫಿಕ್ ಪೊಲೀಸ್ ಠಾಣೆಯ ಸ್ಥಾಪನೆ.
ಪ್ರಮುಖ ರಸ್ತೆಗಳ ಅಗಲೀಕರಣ ಮತ್ತು ಅವಶ್ಯಕವಿರುವೆಡೆ ರೋಡ್ ಬ್ರೇಕರ್ ಅಳವಡಿಕೆ.
ಪಟ್ಟಣದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಾಣ.
ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಒತ್ತಾಯ:
ಸಂಚಾರ ಸಮಸ್ಯೆಯ ಜೊತೆಗೆ ತಾಲೂಕಿನ ಒಟ್ಟಾರೆ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ಬೇಡಿಕೆಗಳನ್ನು ಈ ಕೆಳಗಿನಂತೆ ಸರ್ಕಾರದ ಮುಂದಿಡಲಾಗಿದೆ:
ಅಥಣಿ ಕೆರೆ ಅಭಿವೃದ್ಧಿ: ಪಟ್ಟಣದ ಪ್ರಮುಖ ಜಲಮೂಲವಾದ ಕೆರೆಯನ್ನು ಪುನಶ್ಚೇತನಗೊಳಿಸಿ ಅಭಿವೃದ್ಧಿಪಡಿಸುವುದು.
ಶಿಕ್ಷಣ ಸೌಲಭ್ಯ: ಮೋಟಗಿ ತೋಟ ಶಾಲೆಯಲ್ಲಿ ತಕ್ಷಣವೇ ೯ ಮತ್ತು ೧೦ನೇ ತರಗತಿಗಳನ್ನು ಆರಂಭಿಸುವುದು.
ಆಡಳಿತಾತ್ಮಕ ಮೇಲ್ದರ್ಜೆ: ಹಾಲಿ ಇರುವ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವುದು.
ಹೊಸ ಜಿಲ್ಲೆ ಘೋಷಣೆ: ಭೌಗೋಳಿಕವಾಗಿ ದೊಡ್ಡದಾಗಿರುವ ಅಥಣಿಯನ್ನು ನೂತನ ಜಿಲ್ಲೆಯನ್ನಾಗಿ ಘೋಷಿಸುವುದು.
ಪರಿಶಿಷ್ಟ ಜಾತಿ-ಪರಿಶಿಷ್ಠ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ.)ಯ ರಾಜ್ಯ ಮಾಧ್ಯಮ ವಕ್ತಾರರು ಮಾಧ್ಯಮಗಳ ಮುಖಾಂತರ ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಈ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಮಹೇಶ್ ಶರ್ಮಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Click to listen highlighted text!
error: Content is protected !!